Article Body
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ಅವರು ದಿಢೀರ್ ರಾಜೀನಾಮೆ ನೀಡಿವುದಾಗಿ ವರದಿಯಾಗಿದೆ.
ಇಂದು(ಆ.11) ವಿಧಾನಸಭಾ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚಿಗೆ ಕೆ.ಎನ್.ರಾಜಣ್ಣ ಅವರು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ʼಲೋಕಸಭಾ ಚುನಾವಣೆಯಲ್ಲಿ ಮತಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರೂ ಕಣ್ಣುಮುಚ್ಚಿ ಕುಳಿತಿದ್ದರೇ?ʼ ಎಂದು ಅವರು ಪ್ರಶ್ನಿಸಿದ್ದರು.