ಹಿಂದೆ 15 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದ ಈ ಕೆರೆ ಈಗ ಹತ್ತು ಎಕರೆಗೆ ಇಳಿದಿದೆ. ಈಗ ಕೆರೆಯ ತಳ ಭಾಗ ಎದ್ದು ಕಾಣುತ್ತಿದೆ. ಇದರಲ್ಲಿದ್ದ ನೂರಾರು ಜಾತಿಯ ಮೀನುಗಳು ಕೆರೆಯ ಬದಿಯಲ್ಲಿರುವ ಮರಗಳಲ್ಲಿ ದೂರದ ಊರುಗಳಿಂದ ಬಂದು ನೆಲೆ ನಿಂತಿರುವ ಸಾವಿರಾರು ಬಕ ಪಕ್ಷಿಗಳ ಆಹಾರವಾಗಿತ್ತು.
ಈಗಾಗಲೇ ಅರಣ್ಯ ಇಲಾಖೆ ಹಾಗೂ ಪಂಚಾಯಿತಿಗೆ ಮನವಿ ಸಲ್ಲಿಸಿ, ಮಂಗಗಳನ್ನು ಹಿಡಿದು ಕಾಡುಗಳಲ್ಲಿ ಇವುಗಳ ವಾಸಸ್ಥಾನಗಳಿಗೆ ಹಿಂತಿರುಗಿಸುವ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.